ದಾವಣಗೆರೆ ಡಿಸೆಂಬರ್ 31 : ಜನವರಿ 2 ರಂದು ಬೆಳಿಗ್ಗೆ 10.30ಕ್ಕೆ ನಗರದ ಎ.ವಿ.ಕೆ ಕಾಲೇಜು ರಸ್ತೆಯ ಗುರುಭವನದಲ್ಲಿ ನಿಮ್ಮ ಹಕ್ಕು ನಮ್ಮ ಧ್ವನಿ ಕಾರ್ಯಕ್ರಮದಡಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ.ಎಂ.ಕೊಳ್ಳಾ ಉದ್ಘಾಟಿಸುವರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಗಂಗಾಧರಸ್ವಾಮಿ.ಜಿ.ಎಂ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಟಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಕೆ.ಬಿ.ಕೊಟ್ರೇಶ್ ಉಪಸ್ಥಿತರಿರುವರು.
ಆರ್.ಟಿ.ಇ ಪೋಕ್ಸೋ, ಬಾಲ್ಯ ವಿವಾಹ ನಿಷೇಧ ಕಾಯ್ಡೆ ಮತ್ತು ಬಾಲನ್ಯಾಯ ಕಾಯ್ದೆಗಳ ಕುರಿತು ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ;
ಜನವರಿ 3 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಎ.ವಿ.ಕೆ ಕಾಲೇಜು ರಸ್ತೆಯ ಗುರುಭವನದಲ್ಲಿ ಆರ್.ಟಿ.ಇ ಪೋಕ್ಸೋ, ಬಾಲ್ಯ ವಿವಾಹ ನಿಷೇಧ ಕಾಯ್ಡೆ ಮತ್ತು ಬಾಲನ್ಯಾಯ ಕಾಯ್ದೆಗಳ ಕುರಿತು ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ.ಎಂ.ಕೊಳ್ಳಾ ಉದ್ಘಾಟಿಸುವರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಗಂಗಾಧರಸ್ವಾಮಿ.ಜಿ.ಎಂ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರೆಣ್ಣನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಟಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಕೆ.ಬಿ.ಕೊಟ್ರೇಶ್ ಭಾಗವಹಿಸುವರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೇಲ್ವಿಚಾರಕರು ಹಾಗೂ ಮಕ್ಕಳ ಸಹಾಯವಾಣಿ ಹರ್ಷದ್ ಅಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು.

Leave a Reply

Your email address will not be published. Required fields are marked *