ದಾವಣಗೆರೆ, ಜ. 9 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖಾ , ಸಂಸ್ಥೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬರ್ 11 ರಂದು ನಡೆಸಲಿದ್ದು, ಪರೀಕ್ಷಾ ಸಂಬAಧ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಸೂಚನೆ ನೀಡಿದರು.
ಅವರು ಜನವರಿ 9 ರಂದು ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸುವ ಸಂಬAಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ 13 ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ನಡೆಯಲಿದೆ, ಪ್ರತಿ 24 ವಿದ್ಯಾರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿ, ಅವರಿಗೆ ಅಗತ್ಯ ತರಬೇತಿಯನ್ನು ನೀಡಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳ ಕ್ಯೂಆರ್ ಕೋಡ್ ಅನ್ನು ಸ್ಕಾö್ಯನ್ ಮೂಲಕ ಪಡೆಯುವುದು, ಪರೀಕ್ಷಾ ಕೇಂದ್ರಗಳಿಗೆ ಜಾಮರ್ ಅಳವಡಿಸುವುದು ಎಂದು ತಿಳಿಸಿದರು.
ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಮುಂಜಾಗ್ರತೆ ಕ್ರಮವಾಗಿ 200 ಮೀಟರ್ ಪ್ರದೇಶವನ್ನು ನಿಷೇದಿತ ಸ್ಥಳವೆಂದು ಘೋಷಿಸಲಾಗಿದ್ದು ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಸುವುದು, ಅಭ್ಯರ್ಥಿಗಳ ತಪಾಸಣೆ ಮಾಡಲು ಅಗತ್ಯವಿರುವಷ್ಟು ಹೋಮ್ ಗಾರ್ಡ್ಗಳನ್ನು ನೇಮಿಸಿಕೊಳ್ಳಬೇಕು ಹಾಗೂ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ವ್ಯವಸ್ಥಿತ ರೀತಿಯಲ್ಲಿ ನಡೆಸಲು ಎಲ್ಲಾ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬAಧಿಸಿದAತೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ವಸ್ತç ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕಡ್ಡಾಯವಾಗಿ ಅಭ್ಯರ್ಥಿಗಳು ವಸ್ತç ಸಂಹಿತೆಯನ್ನು ಪಾಲಿಸಬೇಕು. ಅದರ ವಿವರಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ಹಾಗೂ ಇಲಾಖೆಯ ಅಂತರ್ಜಾಲ http://kea.kar.nic.in ದÀಲ್ಲಿ ಅಳವಡಿಸಿದೆ ಎಂದು ತಿಳಿಸಿದರು.
ಎಲೆಕ್ಟಾçನಿಕ್ ವಸ್ತುಗಳು, ಮೊಬೈಲ್ ಫೋನ್ ಗಳು , ಪೆನ್ ಡ್ರೆöÊವ್ ಗಳು, ಇಯರ್ ಫೋನ್ಗಳು, ಮೈಕ್ರೋಫೋನ್ ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳು, ತಿನ್ನಬಹುದಾದ ಪದಾರ್ಥಗಳು, ತಲೆಯ ಮೇಲೆ ಟೋಪಿ , ಮಾಸ್ಕ್ ಅಂತಹ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗದಂತೆ ನಿಷೇದಿಸಲಾಗಿದೆ. ಅಭ್ಯರ್ಥಿಗಳು ಪೆನ್, ಪ್ರವೇಶ ಪತ್ರ ಹಾಗೂ ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಮಾತ್ರ ಪರೀಕ್ಷಾ ಕೇಂದ್ರಗಳಲ್ಲಿ ಅನುಮತಿಸಲಿದೆ ಎಂದು ತಿಳಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ 5 ಆಯ್ಕೆಗಳಿದ್ದು, ಕಡ್ಡಾಯವಾಗಿ ಪ್ರತಿ ಪ್ರಶ್ನೆಗೆ ಉತ್ತರವನ್ನು ಆಯ್ಕೆ ಮಾಡಬೇಕಾಗಿರುತ್ತದೆ. ಒಂದು ವೇಳೆ ಉತ್ತರ ತಿಳಿದಿಲ್ಲವೆಂದರೆ ಪರೀಕ್ಷಾ ಅವಧಿ ನಂತರ ಹೆಚ್ಚುವರಿಯಾಗಿ 5 ನಿಮಿಷಗಳನ್ನು ನೀಡಿದ್ದು ಈ ಅವಧಿಯಲ್ಲಿ ಕೊನೆಯ ಆಯ್ಕೆ ಇ(ಇ) ಅನ್ನು ಕಡ್ಡಾಯವಾಗಿ ಮಾಡಬೇಕು, ಆಯ್ಕೆ ಮಾಡಿಲ್ಲವೆಂದರೆ ವಿದ್ಯಾರ್ಥಿ ಪಡೆದ ಒಟ್ಟು ಅಂಕಗಳಲ್ಲಿ ಒಂದನೇ ನಾಲ್ಕು ಭಾಗ ಕಡಿತಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿ ಹಾಗೂ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಇತರರು ಉಪಸ್ಥಿತರಿದ್ದರು.
filter: 0; fileterIntensity: 0.000000; filterMask: 0; captureOrientation: 0;
shaking: 0.172495; highlight: 1; algolist: 0;
multi-frame: 1;
brp_mask: 0;
brp_del_th: 0.0000,0.0000;
brp_del_sen: 0.0000,0.0000;
delta:null;
module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 316.0;aec_lux_index: 0;albedo: ;confidence: ;motionLevel: -1;weatherinfo: null;temperature: 37;zeissColor: bright; 