ದಾವಣಗೆರೆ ಜನವರಿ 16: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅರ್ಹತಾ ದಿನಾಂಕ 1-1-2026 ಕ್ಕೆ ಅನ್ವಯಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದ ಪ್ರಗತಿ ವೀಕ್ಷಿಸಲು ಮತದಾರರ ಪಟ್ಟಿ ವಿಶೇಷ ವೀಕ್ಷಕರಾದ ಡಾ; ಶಮ್ಲಾ ಇಕ್ಬಾಲ್ ಅವರು ಜನವರಿ 17 ರಂದು ಬೆಳಗ್ಗೆ 11.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸುವರು.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಈ ಅವಧಿಯಲ್ಲಿ ಮತದಾರರ ಪಟ್ಟಿ ವೀಕ್ಷಕರನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಮತದಾರರ ಪಟ್ಟಿ ವೀಕ್ಷಕರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿದ್ದು ಸಾರ್ವಜನಿಕರು ಇವರನ್ನು ಭೇಟಿ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *