filter: 0; fileterIntensity: 0.000000; filterMask: 0; captureOrientation: 0; hdrForward: 0; shaking: 0.036528; highlight: 1; algolist: 0; multi-frame: 1; brp_mask: 8; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 310.0;aec_lux_index: 0;albedo: ;confidence: ;motionLevel: -1;weatherinfo: null;temperature: 36;zeissColor: bright;

ದಾವಣಗೆರೆ, ಜ.14 : ೧೨ ನೇ ಶತಮಾನದ ಶ್ರೇಷ್ಠ ವಚನಕಾರ ಹಾಗೂ ಕರ್ಮಯೋಗಿ ಸಿದ್ದರಾಮೇಶ್ವರ ಅವರ ಆದರ್ಶ ಎಂದಿಗೂ ಪ್ರಸ್ತುತ ಎಂದು ಮಾಯಕೊಂಡ ವಿಧಾನಸಭಾ ಸದಸ್ಯರಾದ ಕೆ‌.ಎಸ್.ಬಸವಂತಪ್ಪ ತಿಳಿಸಿದರು‌‌.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಪಾಟಿಸಿ ಮಾತನಾಡಿದರು.
ಸಿದ್ದರಾಮೇಶ್ವರ ಜೀವನ ಚರಿತ್ರೆಗೆ ಸಂಬಂಧಿಸಿದ ಅನೇಕ ಅಧಾರಗಳಾದ ವಚನ, ಕಾವ್ಯ ಶಾಸನ, ಐತಿಹ್ಯಗಳಲ್ಲಿ ದೊರೆಯುತ್ತವೆ. ಬಾಲ್ಯದಲ್ಲಿ ಮುಗ್ಧಭಕ್ತ. ಮೇಷ ಪಾಲನ ಕಾಯಕ. ಶ್ರೀಶೈಲಕ್ಕೆ ಹೋಗಿ ಮಲ್ಲಿಕಾರ್ಜುನನ ದರ್ಶನ ಪಡೆದ. ಸೊನ್ನಲಿಗೆಗೆ ಬಂದು ದೇವಾಲಯ ಸ್ಥಾಪಿಸಿದ, ಸಕಲ ಜೀವಾವಳಿಯ ನೆಮ್ಮದಿಯ ಬದುಕಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಕಾಯಕದಲ್ಲಿ ತೊಡಗಿ ಕರ್ಮಯೋಗಿ ಎನಿಸಿದ. ಪ್ರಭುದೇವ ಅವನನ್ನು ಕಲ್ಯಾಣಕ್ಕೆ ಕರೆದೋಯ್ದು ಚನ್ನಬಸವಣ್ಣನವರಿಂದ ಇಷ್ಟಲಿಂಗದೀಕ್ಷೆ ಕೊಡಿಸಿದ. ಅನುಭವ ಮಂಟಪದ ಗೋಷ್ಠಿಯಲ್ಲಿ ಪಾಲ್ಗೊಂಡು, ಮಹಾಶಿವಯೋಗಿಯಾದ ಎಂದು ತಿಳಿಸಿದರು.
ದುಡಾ ಅಧ್ಯಕ್ಷ ದಿನೇಶ್ ಶೆಟ್ಟಿ , ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *