ದಾವಣಗೆರೆ,ಜನವರಿ.೧೯: ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಮಹಾಯೋಗಿ ವೇಮನರು ತಮ್ಮ ವಚನಗಳ ಮೂಲಕ ಲೋಕಕ್ಕೆ ಮಾರ್ಗದರ್ಶಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಹಾಯೋಗಿ ವೇಮನ ಜಯಂತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
15ನೇ ಶತಮಾನದ ಅನುಭಾವಿ ಕವಿ ವೇಮನರು ಜಾತಿಯತೆ, ಅಂಧಶ್ರದ್ಧೆ ಮತ್ತು ಮೇಲು-ಕೀಳು ಎಂಬ ಭೇದಭಾವವನ್ನು ತಮ್ಮ ಸಾಹಿತ್ಯದ ಮೂಲಕ ತೀವ್ರವಾಗಿ ಖಂಡಿಸಿದ್ದರು ಎಂದರು.
ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ. ಕೋಟ್ರೇಶ್ ಮಾತನಾಡಿ, “ತಮ್ಮ ಜೀವನದ ಆರಂಭಿಕ ಹಂತದಲ್ಲಿ ಹಲವು ಏರಿಳಿತಗಳನ್ನು ಕಂಡ ವೇಮನರು, ನಂತರ ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮ ಅವರ ಮಾರ್ಗದರ್ಶನದಿಂದಾಗಿ ಸಂತರಾಗಿ ಬೆಳೆದರು” ಎಂದು ಅವರ ಜೀವನ ಹಾದಿಯನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಕೌಸರ್ ರೇಷ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *