ದಾವಣಗೆರೆ, ಜ.21 : ಜಿಲ್ಲಾಡಳಿತ ವತಿಯಿಂದ ಜನವರಿ 26 ರಂದು 77 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜ.26 ರ ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ಬಯಲುಸೀಮೆ ಪದ್ರೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಹೆಚ್.ಬಿ ಮಂಜಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಂದು ಸಂಜೆ 5 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
