ದಾವಣಗೆರೆ ಜ.23- ‘ಮಾಸ್ತಿಯವರ ಸಣ್ಣ ಕತೆಗಳಲ್ಲಿ ಸ್ತ್ರೀ ಸಂವೇದನೆ’ ಕುರಿತು ಕನ್ನಡ ಅಧ್ಯಯನ ವಿಭಾಗದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಸೌಮ್ಯ ಎಸ್. ಅವರಿಗೆ ಪಿಎಚ್.ಡಿ. ಪದವಿ ನೀಡಿದೆ.
ಸೌಮ್ಯ ಅವರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಕೆ. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಸೌಮ್ಯ ಅವರಿಗೆ ಜನವರಿ 30 ರಂದು ನಡೆಯುವ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು.

Leave a Reply

Your email address will not be published. Required fields are marked *