ದಾವಣಗೆರೆ ಫೆ.05 : ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಫೆ.7 ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಆಗಮಿಸುವರು.
ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿಯ ಗ್ರಾಮಸೌಧ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮ.12.30ಕ್ಕೆ ಶಿವಮೊಗ್ಗಕ್ಕೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.
