ದಾವಣಗೆರೆ ಫೆ.12 : ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

   ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.

ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

 ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್  ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *