ದಾವಣಗೆರೆ ಫೆಬ್ರವರಿ 17 : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.inಮುಖಾಂತರ ಗ್ರಾಮ ಒನ್. ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನವಾಗಿರುತ್ತದೆ. ನಿಗಮದ ವೆಬ್‌ಸೈಟ್ http://kvcdc.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದು

ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಮತ್ತು 6363564821 ಸಂಪರ್ಕಿಸಬಹುದೆಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *