ದಾವಣಗೆರೆ ಫೆಬ್ರವರಿ 20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ಇವರ ಸಹಯೋಗದಲ್ಲಿ ಫೆ.23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡೆಂಟಲ್ ಕಾಲೇಜು ರಸ್ತೆ, ಎಂ.ಸಿ.ಸಿ. ಬಿ ಬ್ಲಾಕ್‍ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಉದ್ಟಾಟಿಸಿ, ಅಧ್ಯಕ್ಷತೆ ವಹಿಸುವರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಲೋೀಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ಬಯಲುಸೀಮೆ ಪದ್ರೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಹೆಚ್.ಬಿ ಮಂಜಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‍ರಾವ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ;ಶೇಖರ್.ಹೆಚ್.ಟಿ
ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ವಾಸಿರೆಡ್ಡಿ ವಿಜಯ ಜೋತ್ಸ್ನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Leave a Reply

Your email address will not be published. Required fields are marked *