ದಾವಣಗೆರೆ ಮಾ.07 : ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ, ಆದರೆ ಈ ಸಬಲೀಕರಣವು ಕೇವಲ ಅಂಕಿ-ಅಂಶ ಅಥವಾ ಭಾಷಣಗಳಿಗೆ ಸೀಮಿತವಾಗದೆ, ಸಮಾಜದ ಕಟ್ಟಕಡೆಯ ಮಹಿಳೆಯೂ ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವತಂತ್ರಳಾದಾಗ ಮಾತ್ರ ಮಹಿಳಾ ದಿನಾಚರಣೆ ಅರ್ಥಗರ್ಭಿತವಾಗಿರುತ್ತದೆÉ ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅಭಿಪ್ರಾಯಪಟ್ಟರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಲ್ಲಿ ಅಪ್ರತಿಮ ಶಕ್ತಿ ಹಾಗೂ ತಾಳ್ಮೆಯಿದ್ದು, ಅದನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು, 9 ರಿಂದ 14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸರ್ಕಾರವು ಉಚಿತವಾಗಿ ನೀಡುತ್ತಿರುವ ಹೆಚ್.ಪಿ.ವಿ ಲಸಿಕೆಯನ್ನು ಪ್ರತಿಯೊಬ್ಬ ಪೆÇೀಷಕರು ತಪ್ಪದೇ ಕೊಡಿಸಬೇಕು. ಇದು ಮಹಿಳೆಯರ ಭವಿಷ್ಯದ ಆರೋಗ್ಯ ದೃಷ್ಟಿಯಿಂದ ಅತ್ಯಂತ ಅವಶ್ಯಕ, ಸ್ವಸಹಾಯ ಸಂಘಗಳು ಮತ್ತು ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ. ನಬಾರ್ಡ್ ಹಾಗೂ ಬ್ಯಾಂಕುಗಳಿಂದ ಸಿಗುವ ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳಾ ಉದ್ಯಮಿಗಳಾಗಿ ಹೊರಹೊಮ್ಮಬೇಕು ಎಂದರು.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫಲಿತಾಂಶಗಳಲ್ಲಿ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸುತ್ತಿರುವುದು ಸಂತೋಷದ ವಿಚಾರ. ಆದರೆ, ಉನ್ನತ ಶಿಕ್ಷಣದ ಹಂತದಲ್ಲಿ ಅವರು ಅರ್ಧಕ್ಕೆ ಶಿಕ್ಷಣ ಬಿಡದಂತೆ ನೋಡಿಕೊಂಡು ಅವರಿಗೆ ಪೂರಕ ವಾತಾವರಣ ನಿರ್ಮಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸಾಗಿರುವುದು ಐತಿಹಾಸಿಕ ಹೆಜ್ಜೆ. ಆಡಳಿತದ ವಿವಿಧ ಹಂತಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಸಮಾನತೆಯ ಸಂಕೇತವಾಗಿದೆ, ಒಬ್ಬ ಮಹಿಳೆ ಮತ್ತೊಬ್ಬ ಮಹಿಳೆಯನ್ನು ಪೆÇ್ರೀತ್ಸಾಹಿಸಿ ಮೇಲೆತ್ತುವ ಕೆಲಸ ಮಾಡಬೇಕು. ನಾವು ಬಿತ್ತಿದ ಮೌಲ್ಯಗಳೇ ಮುಂದೆ ದೊಡ್ಡ ಮರವಾಗಿ ಸಮಾಜಕ್ಕೆ ನೆರವಾಗುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಸಮೃದ್ಧಿ ಗಿತ್ತೆಮಾಧವ ಅವರು ಉಪನ್ಯಾಸ ನೀಡಿ, ನಮ್ಮ ಜೀವನದಲ್ಲಿ ಜೀವನಶೈಲಿಯ ಬದಲಾವಣೆಗಳು ಅಗತ್ಯ, ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯ ತಪಾಸಣೆಯನ್ನು ನಿಯಮಿತವಾಗಿ ಮಾಡಿಸಿಕೊಳ್ಳಬೇಕು. ಪೌಷ್ಟಿಕ ಆಹಾರ, ಹಣ್ಣುಗಳು ಬೇಸಿಗೆಯಲ್ಲಿ ಮಾವು, ದ್ರಾಕ್ಷಿ ಮತ್ತು ಹಸಿರು ಎಲೆಗಳ ತರಕಾರಿಗಳನ್ನು ಸೇವಿಸಬೇಕು. ಆಹಾರದಲ್ಲಿ ದ್ವಿದಳ ಧಾನ್ಯಗಳು, ಮೊಟ್ಟೆ ಮತ್ತು ಸೋಯಾಬೀನ್ ಸೇರಿಸುವುದು ಒಳ್ಳೆಯದು. ಪ್ರತಿದಿನ ಕನಿಷ್ಠ 30 ನಿಮಿಷಗಳ ನಡಿಗೆ ಅಥವಾ ತಮಗಿಷ್ಟವಾದ ಬ್ಯಾಡ್ಮಿಂಟನ್, ಟೆನ್ನಿಸ್ನಂತಹ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮೂಳೆಗಳ ಆರೋಗ್ಯಕ್ಕಾಗಿ ಬೆಳಿಗ್ಗೆ 10 ಗಂಟೆಯ ಸುಮಾರಿಗೆ 10-15 ನಿಮಿಷಗಳ ಕಾಲ ಬಿಸಿಲಿಗೆ ಮೈಯೊಡ್ಡಬೇಕು. ಮೆನೋಪಾಸ್ ಎನ್ನುವುದು ಮಹಿಳೆಯರ ಜೀವನದ ಒಂದು ಸಂಕೀರ್ಣ ಹಂತವಾಗಿದ್ದು, ಈ ಸಮಯದಲ್ಲಿ ಹಾರ್ಮೋನ್ ಬದಲಾವಣೆಗಳಿಂದಾಗಿ ಕೆಲವು ಲಕ್ಷಣಗಳು ಕಂಡುಬರುತ್ತವೆ, ಹಠಾತ್ ಮೈ ಬಿಸಿಯಾಗುವುದು ರಾತ್ರಿ ವೇಳೆ ಬೆವರುವಿಕೆ, ನಿದ್ರಾಹೀನತೆ, ಜ್ಞಾಪಕಶಕ್ತಿ ಕಡಿಮೆಯಾಗುವುದು ಮತ್ತು ಕೀಲು ನೋವು ಕಾಣಿಸಿಕೊಳ್ಳಬಹುದು, 15 ದಿನಕ್ಕೊಮ್ಮೆ ಮುಟ್ಟಾಗುವುದು ಅಥವಾ ಅತಿಯಾದ ರಕ್ತಸ್ರಾವದಂತಹ ಸಮಸ್ಯೆಗಳಿದ್ದರೆ ತಕ್ಷಣ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು.
ಭಾರತೀಯ ಮಹಿಳೆಯರಲ್ಲಿ ಸಾವಿಗೆ ಪ್ರಮುಖ ಕಾರಣವಾಗುತ್ತಿರುವ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಜಾಗೃತಿ ವಹಿಸುವುದು ಅತ್ಯಂತ ಅವಶ್ಯಕವಾಗಿದೆ, ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ತಡೆಗಟ್ಟುವುದು ಯಾವಾಗಲೂ ಉತ್ತಮ ಎಂದರು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಮಾತನಾಡಿ, ಕುಟುಂಬದ ಆರೋಗ್ಯವು ಮಹಿಳೆಯರ ಕೈಯಲ್ಲಿದ್ದು, ಅವರು ತಮ್ಮ ವೈಯಕ್ತಿಕ ಅಭಿವೃದ್ಧಿಯ ಜೊತೆಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು, 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಎಚ್.ಪಿ.ವಿ ಲಸಿಕೆಯನ್ನು ಕಡ್ಡಾಯವಾಗಿ ಕೊಡಿಸಬೇಕು. ಕಾಮಾಲೆ ರೋಗವನ್ನು ತಡೆಗಟ್ಟಲು ಹೆಪಟೈಟಿಸ್ ಬಿ ಲಸಿಕೆಯ ಎರಡು ಡೋಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಪಡೆಯಬಹುದು. ವಾರ್ಷಿಕ ಸುಮಾರು 400 ರೂ.ಗಳ ಕಂತು ಪಾವತಿಸುವ ಮೂಲಕ ಪಿಎಂ ಜೆಜೆಬಿವೈ ವಿಮೆ ಮಾಡಿಸಿಕೊಳ್ಳಬೇಕು. ಇದರಿಂದ ಅನಿರೀಕ್ಷಿತ ಘಟನೆ ಸಂಭವಿಸಿದಲ್ಲಿ ಕುಟುಂಬಕ್ಕೆ 4 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು ಸಿಗಲಿದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ಅಸಂಘಟಿತ ಕಾರ್ಮಿಕರಿಗಾಗಿ ಇರುವ ಈ ಪಿಂಚಣಿ ಯೋಜನೆಯಲ್ಲಿ ಮಾಸಿಕ 56 ರೂ.ಗಳಿಂದ ಹೂಡಿಕೆ ಆರಂಭಿಸಬಹುದು. 60 ವರ್ಷದ ನಂತರ ಮಾಸಿಕ 3,000 ರೂ.ಗಳ ಪಿಂಚಣಿ ದೊರೆಯಲಿದೆ. ರೈತ ಮಹಿಳೆಯರು ಮತ್ತು ಸ್ವಸಹಾಯ ಸಂಘಗಳ ಅಭಿವೃದ್ಧಿಗಾಗಿ ನಬಾಡ್ನಿರ್ಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳು ಲಭ್ಯವಿದ್ದು, ಮಹಿಳೆಯರು ಇದರ ಲಾಭ ಪಡೆಯಬೇಕು, ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ 300 ಅಪಘಾತಗಳಲ್ಲಿ 179 ಜನ ಹೆಲ್ಮೆಟ್ ಧರಿಸದ ಕಾರಣ ಸಾವನ್ನಪ್ಪಿದ್ದಾರೆ, ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸಿದರು. ಮಹಿಳೆಯರು ಕೇವಲ ಬ್ಯಾಂಕಿನಲ್ಲಿ ಹಣ ಉಳಿಸದೆ, ಅದನ್ನು ಉತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿ ಉದ್ಯಮಶೀಲರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಯೋಜನಾ ನಿರ್ದೇಶಕರಾದ ಶ್ರೀಮತಿ ರೇμÁ್ಮ ಕೌಸರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಲರಾವ್ , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ರೇμÁ್ಮ ಕೌಸರ್, ಶಾಲಾ ಶಿಕ್ಷಣ ಇಲಾಖೆ ಡಯಟ್ ಉಪನಿರ್ದೇಶಕಿ ಗೀತಾ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ರಶ್ಮಿ ರೇಖಾ ಎಂ.ಎಸ್ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *