ಹೊನ್ನಾಳಿ ತಾಲ್ಲೂಕಿನ ಯಾರೇಚಿಕ್ಕನಹಳ್ಳಿ ಗ್ರಾಮದಲ್ಲಿ ಇದೇ ಮಾರ್ಚ್ 23 ರಂದು ವಿಶೇಷ ಹೆಣ್ಣು ಕರುಗಳ ಪ್ರದರ್ಶನ ಹಾಗೂ ಹೈನುಗಾರರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸಹಕಾರ ಹಾಲು ಮಹಾಮಂಡಳ (KMF), ಶಿವಮೊಗ್ಗ-ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಶಿಮುಲ್), ಪಶುವೈದ್ಯಕೀಯ ಹಾಗೂ ಪಶುಸಂಗೋಪನಾ ಸೇವಾ ಇಲಾಖೆ, ದಾವಣಗೆರೆ ಮತ್ತು ಯಾರೇಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಉತ್ತಮ ರೀತಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹಾಲು ಉತ್ಪಾದನೆ ಮಾಡುತ್ತಿರುವ ರೈತರಿಗೆ ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಿವಮೊಗ್ಗ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
