ದಾವಣಗೆರೆ, ಮಾ.25 : 107-ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು 10 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಮಹಿಳೆಯರಿಗಾಗಿ 5 ‘ಸಖಿ’ ಮತಗಟ್ಟೆಗಳು, 2 ಯುವ ಮತಗಟ್ಟೆಗಳು, 2 ಥೀಮ್ಯಾಟಿಕ್ (ಸಾಂಸ್ಕೃತಿಕ) ಮತಗಟ್ಟೆಗಳು ಮತ್ತು 1 ವಿಕಲಚೇತನ ಸ್ನೇಹಿ ಮತಗಟ್ಟೆ ಸೇರಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಾನಿರ್ವಾಕಾಧಿಕಾರಿ ಗಿತ್ತೆ ಮಾಧವ ವಿಠಲರಾವ್‌ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಘೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

ಮಹಿಳಾ ಮತದಾರರು ಹೆಚ್ಚು ಇರುವ ಕಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಿ ಅಲ್ಲಿ ಮಹಿಳಾ ಅಧಿಕಾರಿ/ನೌಕರರನ್ನು ನಿಯೋಜಿಸಲಾಗುವುದು , ಥೀಮ್ಯಾಟಿಕ್‌ ಮತಟ್ಟೆಗಳಲ್ಲಿ ನಮ್ಮ ಸಂಸ್ಕೃತಿ ಕಲೆಗಳನ್ನು ಬಿಂಬಿಸುವಂತಹ ಮತಗಟ್ಟೆಗಳು, ಹೆಚ್ಚು ಯುವ ಮತದಾರರು ಇರುವ ಕಡೆ ಯುವ ಮತಗಟ್ಟೆ ಸ್ಥಾಪಿಸಿ ಅಲ್ಲಿ 18 ರಿಂದ 21 ವರ್ಷ ದೊಳಗಿನ ಅಧಿಕಾರಿ/ನೌಕರರನ್ನು ನಿಯೋಜಿಸಲಾಗುವುದು ಹಾಗೂ ವಿಕಲಚೇತನ ಸ್ನೇಹಿ ಮತಗಟ್ಟೆಯಲ್ಲಿ ವಿಕಲಚೇತನ ಅಧಿಕಾರಿ/ನೌಕರರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಸಿ-ವಿಜಿಲ್ (C-Vigil) ಆ್ಯಪ್: ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ತಕ್ಷಣ ದೂರು ನೀಡಲು ‘ಸಿ-ವಿಜಿಲ್’ ಆ್ಯಪ್ ಬಳಸಿ ಫೋಟೋ ಅಥವಾ ವಿಡಿಯೋ ಅಪ್‌ಲೋಡ್ ಮಾಡಿದ 24 ಗಂಟೆಗಳ ಒಳಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *