ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *