ಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಸದಸ್ಯರ ಕುಂದುಕೊರತೆಗಳ ನಿವಾರಣೆಗೆ ವೇದಿಕೆಯಾಗಿಯೂ ಕೆಲಸ ಮಾಡಲಿರುವ ‘ನಿಧಿ ಆಪ್ಕೆ ನಿಕಟ್ 2.0’ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆ, ಹರಿಹರದ ಮರಿಯಾ ನಿವಾಸ್ ಶಾಲೆ, ಪಿ.ಬಿ. ರಸ್ತೆ ಇಲ್ಲಿ 27 ಏಪ್ರಿಲ್ 2026 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗಾಗಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.00 ರವರೆಗೆ ನಿವೃತ್ತಿ ವೇತನದಾರರಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಸಾರ್ವಜನಿಕರು ಮತ್ತು ಸಂಬಂಧಪಟ್ಟ ಫಲಾನುಭವಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
