ಸಕ್ತ ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕುವಾರು ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡಬಹುದು. ಸಾರ್ವಜನಿಕರಿಂದ ದೂರು ಸ್ವೀಕರಿಸಿದ ತಕ್ಷಣವೇ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
