ನಗರದಲ್ಲಿ ಏಪ್ರಿಲ್ 19 ಮತ್ತು 20 ರಂದು ಹಮ್ಮಿಕೊಳ್ಳಲಾಗಿರುವ ಬಸವ ಜಯಂತಿ ಆಚರಣೆಯ ಪ್ರಯುಕ್ತ, ಸಾರ್ವಜನಿಕರ ಹಿತದೃಷ್ಟಿಯಿಂದ ವಾರ್ಡ್ ಸಂಖ್ಯೆ 18ರ ವ್ಯಾಪ್ತಿಯಲ್ಲಿ ನಡೆಯುವ ರವಿವಾರದ ಸಂತೆಯನ್ನು ತಾತ್ಕಾಲಿಕವಾಗಿ ಶ್ರೀ ದುರ್ಗಾಂಭಿಕಾ ರಸ್ತೆಗೆ ಸ್ಥಳಾಂತರಿಸಲಾಗಿದೆ ಶ್ರೀ ಬಸವೇಶ್ವರ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಪ್ರತಿ ಭಾನುವಾರ ನಡೆಯುತ್ತಿದ್ದ ಈ ಸಂತೆಯನ್ನು, ಆಚರಣೆಯ ಸುಗಮ ನಿರ್ವಹಣೆ ಹಾಗೂ ಆಡಳಿತಾತ್ಮಕ ಕಾರಣಗಳಿಗಾಗಿ ಈ ಎರಡು ದಿನಗಳ ಅವಧಿಗೆ ಮಾತ್ರ ರದ್ದುಪಡಿಸಲಾಗಿದೆ. ಆದುದರಿಂದ, ಸಾರ್ವಜನಿಕರು, ರೈತರು ಹಾಗೂ ವ್ಯಾಪಾರಸ್ಥರು ಈ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಕೋರಿದ್ದಾರೆ.

Leave a Reply

Your email address will not be published. Required fields are marked *