ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ 11 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ಅಂತರ್ಜಾಲ https://kpp.karnataka.gov.in ರಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 – ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
