ಹರಿಹರ ನಗರಸಭಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಏಪ್ರಿಲ್ 18 ರಂದು ನಗರದಾದ್ಯಂತ ಬೆಳಿಗ್ಗೆ 9.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ. ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿ̧ದೆ ಕವಲೆತ್ತು ಗ್ರಾಮದ ಹತ್ತಿರವಿರುವ ಜ್ಯಾಕ್‌ವೆಲ್ ಹಾಗೂ ನೀರು ಶುದ್ಧೀಕರಣ ಘಟಕದಲ್ಲಿ ಟ್ರಾನ್ಸ್‌ಫಾರ್ಮರ್ ಆಯಿಲ್ ಫಿಲ್ಟ್ರೇಶನ್ ಮತ್ತು ಆಯಿಲ್ ಟಾಪ್-ಅಪ್ ಕೆಲಸಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿ ಕಾರ್ಯಚರಣೆ ಮತ್ತು ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸುವಂತೆ ಹರಿಹರ ನಗರಸಭೆ ಪೌರಾಯುಕ್ತರು ಕೋರಿದ್ದಾರೆ.

Leave a Reply

Your email address will not be published. Required fields are marked *