ರಾಜ್ಯದಲ್ಲಿ ಕೃಷಿ ಶಿಕ್ಷಣಕ್ಕೆ ಇರುವ ಹೆಚ್ಚಿನ ಬೇಡಿಕೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರವು ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಷನ್ (ಸಂಯೋಜನೆ) ನೀಡಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು (KSNUAHS) 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಹೊಸ ಅಫಿಲಿಯೇಟೆಡ್ ಖಾಸಗಿ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಲೇಜು ಆರಂಭಿಸಲು ಇಚ್ಛಿಸುವ ಕಾನೂನುಬದ್ಧ ಶೈಕ್ಷಣಿಕ ಸಂಸ್ಥೆಗಳು/ಟ್ರಸ್ಟ್/ಸೊಸೈಟಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 06,  ಆಸಕ್ತ ಸಂಸ್ಥೆಗಳು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.uahs.edu.in ಗೆ ಭೇಟಿ ನೀಡಿ, ‘KSNUAHS-MSACR 2025’ ರ ಅಡಿಯಲ್ಲಿ ನಿಗದಿಪಡಿಸಲಾದ ಕನಿಷ್ಠ ಮಾನದಂಡಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಅಪೂರ್ಣವಾಗಿರುವ ಅಥವಾ ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *