ಪ್ರಸಕ್ತ ಸಾಲಿನ ಸಿಪೆಟ್ ಮೈಸೂರು ಸಿಎಸ್ಟಿಎಸ್ ಡಿಪೆÇ್ಲಮಾ ಕೋರ್ಸ್ ಪ್ರವೇಶ ಪ್ರಾರಂಭವಾಗಿದ್ದು, ಐಟಿಐ, ಪಿಯುಸಿ(ವಿಜ್ಞಾನ)ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಸ್ಕೀಮ್ ಮೂಲಕ 2 ನೇ ವರ್ಷ, 3 ನೇ ಸೆಮಿಸ್ಟರ್ಗೆ ಡಿಪೆÇ್ಲೀಮಾ ಕೋರ್ಸ್ ಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಿಪಿಟ್ ವಿದ್ಯಾರ್ಥಿಗಳು ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪೆÇ್ಲೀಮಾದ ಕೊನೆಯ ಸೆಮಿಸ್ಟರ್ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ. ಸಂ. 8124489163/0821-2516322 ಸಂಪರ್ಕಿಸಬಹುದೆಂದು ಸಿಪೆಟ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

