ಕರ್ನಾಟಕ ಸರ್ಕಾರವು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ (ಕೆಇಎ) ನಡೆಯಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದೆ.
   ಆಸಕ್ತರು ಜುಲೈ 21 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ.ನವೀನ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *