ಮೈ ಭಾರತ್ (ಯುವ ವ್ಯವಹಾರಗಳು ಹಾಗೂ ಕ್ರೀಡಾ ಮಂತ್ರಾಲಯ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುಬಿಟಿಡಿ ಇಂಜಿನಿಯರಿಂಗ್ ಕಾಲೇಜು ಹಾಗೂ ಮದ್ಯಪಾನ ಸಂಯಮ ಮಂಡಳಿ , ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಶಾ ಮುಕ್ತ ಭಾರತ್ ಅಭಿಯಾನ ಮತ್ತು ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯ ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಶ್ರೀ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರು ಉದ್ಫಾಟಿಸುವರು. ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಪಿ.ನಾಗರಾಜಪ್ಪ ಅವರು ಅಧ್ಯಕ್ಷತೆ ವಹಿಸುವರು, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ , ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್.ಟಿ.ಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ದಾವಣಗೆರೆ ಡಿ.ಹೆಚ್.ಒ ಡಾ.ಮಧು, ಮೈ ಭಾರತ್ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಶರಣ್ಯ ಬಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮನೋವೈದ್ಯರಾದ ಡಾ.ಮರುಳಸಿದ್ದಪ್ಪ ಅವರು ಉಪನ್ಯಾಸ ನೀಡುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಅವರು ತಿಳಿಸಿದ್ದಾರೆ.
