ದಾವಣಗೆರೆ,ಆ.13: ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರೆವೇರಿಸುವರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೆ.ಎಸ್ ಬಸವಂತಪ್ಪ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್,
ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಡಿ.ಎಸ್ ಅರುಣ್, ಚಿದಾನಂದ. ಎಂ.ಗೌಡ, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾಧ ವಡ್ನಾಳ್ ಜಗದೀಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಬಯಲುಸೀಮೆ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಹೆಚ್.ಬಿ ಮಂಜಪ್ಪ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಆಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿಯ ಅಧ್ಯಕ್ಷರಾದ ಎನ್.ಜಯದೇವನಾಯ್ಕ, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‍ರಾವ್, ಪೊಲೀಸ್ ಮಹಾನಿರೀಕ್ಷಕರಾದ ರವಿಕಾಂತೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ, ಆಯುಕ್ತರಾದ ಡಾ.ಎನ್ ಮಹಾಂತೇಶ್ ಉಪಸ್ಥಿತರಿರುವರು.
ಅಂದು ಸಂಜೆ 5 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

