ದಾವಣಗೆರೆ ಸೆಪ್ಟೆಂಬರ್ 05 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನ  ಜಿಲ್ಲೆಯ ಜನರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಆಡಳಿತವನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಯೋಜನೆ ಯಾಗಿದ್ದು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ  ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ ಅವರು ತಿಳಿಸಿದರು.
    ಅವರು ಶನಿವಾರ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಯಲ್ಲಿ ಏರ್ಪಡಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ   ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಮಾನ್ಯ ಮುಖ್ಯಮಂತ್ರಿಗಳು  ವಿಜಯನಗರ ಜಿಲ್ಲೆ ಕೂಡ್ಲಿಗಿ ಯಲ್ಲಿ ಪ್ರಜಾಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಅವರ ಆಶಯದಂತೆ ದಾವಣಗೆರೆ ಜಿಲ್ಲೆಯಲ್ಲೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.    ಪ್ರಜಾಸೇವೆ ಅಭಿಯಾನ ಸಾರ್ವಜನಿಕರು ಹಾಗೂ ಬಡಜನರಿಗೆ ಯಾವುದೇ ಅಡೆತಡೆಯಿಲ್ಲದೆ ಮತ್ತು ಭ್ರμÁ್ಟಚಾರರಹಿತವಾಗಿ ಸರ್ಕಾರದ ಸೇವೆಗಳನ್ನು ತಲುಪಿಸುವುದು, ಈ ಅಭಿಯಾನದ ಮುಖ್ಯ ಉದ್ದೇಶ ಎಂದರು.
    ಜಿಲ್ಲಾಡಳಿತವು ಸಂಪೂರ್ಣವಾಗಿ ಸಾರ್ವಜನಿಕರು ಮತ್ತು ರೈತರ ಬೆಂಬಲಕ್ಕೆ ನಿಂತಿದ್ದು, ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಾಗುವುದು. ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ವಿಸ್ತರಿಸುವ ಹಾಗೂ ಆಡಳಿತವನ್ನು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಆನ್‍ಲೈನ್ ಮೂಲಕ ಪ್ರಮುಖ ಯೋಜನೆಗಳು ಮತ್ತು ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರಿಗೆ ತ್ವರಿತ ಹಾಗೂ ಪಾರದರ್ಶಕ ಸೇವೆ ತಲುಪಿಸಲು ಅಗತ್ಯ ಕ್ರಮ ವಹಿಸುತ್ತಿವೆ. ಸಾರ್ವಜನಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
     ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ‘ಗೃಹಲಕ್ಷ್ಮಿ’, ‘ಶಕ್ತಿ’, ‘ಅನ್ನಭಾಗ್ಯ’ ಮತ್ತು ‘ಯುವನಿಧಿ’ ಸೇರಿದಂತೆ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿರುವುದನ್ನು ಖಾತರಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
 ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಜನಪ್ರತಿನಿಧಿಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ಎರಡನೇ ಮತ್ತು ಕೊನೆಯ ಶನಿವಾರ ‘ಪ್ರಜಾಸೇವೆ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಹೊನ್ನಾಳಿಯಲ್ಲಿ ಕಾರ್ಯಕ್ರಮ ನೆರವೇರಿದ್ದು, ಚನ್ನಗಿರಿ, ಜಗಳೂರು, ಹರಿಹರ ಸೇರಿದಂತೆ ಇತರ ತಾಲ್ಲೂಕುಗಳಲ್ಲಿ ಮುಂದಿನ ದಿನಗಳಲ್ಲಿ (ನವೆಂಬರ್ ವೇಳೆಗೆ) ಹಂತ-ಹಂತವಾಗಿ ವಿಸ್ತರಿಸಲಾಗುವುದು ಎಂದರು.
    ಜಿಲ್ಲೆಯ ಹೊನ್ನಾಳಿ, ಜಗಳೂರು, ಹರಿಹರ ಹಾಗೂ ದಾವಣಗೆರೆ ತಾಲ್ಲೂಕುಗಳು  ಬರಪೀಡಿತ ಪ್ರದೇಶಗಳೆಂದು ಗುರುತಿಸಲ್ಪಟ್ಟಿವೆ.  ಜಿಲ್ಲೆಯ ಒಟ್ಟು 4 ತಾಲ್ಲೂಕುಗಳಲ್ಲಿ ಉಂಟಾಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಒಟ್ಟು ₹469 ಕೋಟಿ ಪರಿಹಾರ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯ 31,000 ರೈತರಿಗೆ ₹42 ಕೋಟಿ ಬೆಳೆ ವಿಮೆ  ಪರಿಹಾರವನ್ನು ಶೀಘ್ರವೇ ತಲುಪಿಸಲು ಅಗತ್ಯ ಕ್ರಮ ಹಾಗೂ ಪ್ರಸ್ತಾವನೆಗಳನ್ನು ಸಿದ್ಧಪಡಿಸಲಾಗಿದೆ .
 ಮಳೆ ಕೊರತೆ ಮತ್ತು ಬೆಳೆ ಹಾನಿಯ ನಿಖರ ಸಮೀಕ್ಷೆಗಾಗಿ ವಿಶೇಷ  ತಂತ್ರಜ್ಞಾನವನ್ನು ಬಳಸಿಕೊಂಡು, ಪ್ರತಿಯೊಬ್ಬ ಸಂತ್ರಸ್ತ ರೈತನಿಗೂ ನ್ಯಾಯಯುತ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯ  ಶಾಸಕರು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಿ, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದಿಂದ ಲಭ್ಯವಾಗುವ ಅನುದಾನ ಹಾಗೂ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು, ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು.
    ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಹಾಗೂ ಇತ್ತೀಚಿನ ಮಳೆಯಿಂದಾದ ಹಾನಿಗೆ ಸುಮಾರು  15 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು, ಪ್ರವಾಹ ಹಾನಿ ತಡೆ ಹಾಗೂ ಮೂಲಸೌಕರ್ಯಗಳ ದುರಸ್ತಿಗೆ ಯೋಜನೆ ರೂಪಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕೃಷಿ, ನೀರಾವರಿ ಹಾಗೂ ಇತರ ಪ್ರಮುಖ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ, ಪ್ರಜಾಸೇವೆಗೆ ಆದ್ಯತೆ ನೀಡಬೇಕು. ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ತಿಳಿಸಿದರು .
    ಹೊನ್ನಾಳಿ ಶಾಸಕ ಡಿ. ಜಿ.ಶಾಂತನಗೌಡ ಅವರು ಮಾತನಾಡಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ‘ಪ್ರಜಾಸೇವೆ’ ಕಾರ್ಯಕ್ರಮಕ್ಕೆ ಹೊನ್ನಾಳಿ ತಾಲೂಕಿನಲ್ಲಿ ಚಾಲನೆ ನೀಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಅವರ ಮನೆ ಬಾಗಿಲಲ್ಲೇ ಬಗೆಹರಿಸುವ ಉದ್ದೇಶದಿಂದ ಈ ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ, ಇನ್ಮುಂದೆ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ತಾಲೂಕು ಕಚೇರಿ ಅಥವಾ ಜಿಲ್ಲಾ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೇ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಲಿಖಿತ ಅರ್ಜಿ ಹಾಗೂ ಕುಂದುಕೊರತೆಗಳನ್ನು ಸ್ವೀಕರಿಸಿ, ಶೀಘ್ರ ಪರಿಹಾರ ಒದಗಿಸಲಿದ್ದಾರೆ ಎಂದರು.
 ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಶೇ. 100 ರಷ್ಟು ಯಶಸ್ವಿಯಾಗಿ ಅನುμÁ್ಠನಕ್ಕೆ ತರಲಾಗಿದ್ದು, ಇಡೀ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ.
 ಹೊನ್ನಾಳಿ ತಾಲೂಕಿನಲ್ಲಿ ಕಳೆದ ಅವಧಿಯಲ್ಲಿ 367 ಪೆÇೀಡಿ ಮುಕ್ತ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ. ಜೊತೆಗೆ 3,587 ಭೌತಿಕ ಕಾರ್ಯಗಳನ್ನು ಹಾಗೂ 94. ಸಿ ಅಡಿಯಲ್ಲಿ ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ಅವರು ಪ್ರಸ್ತಾವಿಕವಾಗಿ ಮಾತನಾಡಿದರು.
ಬಯಲು ಸೀಮೆ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಂಜಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಪೆÇಲೀಸ್ ವರಿμÁ್ಠಧಿಕಾರಿ ಡಾ. ಶೇಖರ್ ಹೆಚ್ ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಹೊನ್ನಾಳಿ ಉಪ ವಿಭಾಗಾಧಿಕಾರಿ ಚನ್ನಪ್ಪ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *