ಸಾಸ್ವೆಹಳ್ಳಿ: ಹನಗವಾಡಿಯ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ಲಾಭದಲ್ಲಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯುಕ್ತ ಲಿಂಗಾಪುರ ಗ್ರಾಮದ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಲ್ಲಿ ಉಪಶಾಖೆ ಹಾಗೂ ಸಿ.ಎಸ್.ಸಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಹೊನ್ನಾಳಿ ಶಾಸಕ ಡಿ.ಜಿ ಶಾಂತನ ಗೌಡ ಹೇಳಿದರು.

ಸಮೀಪದ ಹನಗವಾಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಲಿಂಗಾಪುರ ಗ್ರಾಮದಲ್ಲಿ ಸಂಘದ ನೂತನ ಉಪಶಾಖೆ ಹಾಗೂ ಸಿ.ಎಸ್.ಸಿ ಕೇಂದ್ರದ ಉದ್ಘಾಟಸಿ ಅವರು ಮಾತನಾಡಿದರು.

ಗ್ರಾಮಗಳ ಅಭಿವೃದ್ಧಿಯೇ ತಮ್ಮ ಮುಖ್ಯ ಗುರಿಯಾಗಿದ್ದು, ಕಾಂಗ್ರೆಸ್ ಸರ್ಕಾರವು ಪ್ರತಿ ಗ್ರಾಮಕ್ಕೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದರು.
ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್. ಬಿ. ಮಂಜಪ್ಪ ಮಾತನಾಡಿ, ಪ್ರತಿಯೊಬ್ಬ ರೈತರೂ ಸಂಘದಿಂದ ಸಾಲ ಪಡೆದ ನಂತರ ಅದನ್ನು ಮರುಪಾವತಿ ಮಾಡುವ ಹೊಣೆಗಾರಿಕೆ ಹೊಂದಿರುತ್ತಾರೆ. ಜವಾಬ್ದಾರಿಯುತವಾಗಿ ಸಾಲ ತೀರಿಸುವ ಮೂಲಕ ಗ್ರಾಮದ ಅಭಿವೃದ್ಧಿಯ ಜೊತೆಗೆ ಸಂಘವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ. ಎಚ್. ಮರಿಯೋಜಿ ರಾವ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ಪ, ಹೊನ್ನಾಳಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಎಚ್ ಎ ಗದ್ದಿಗೇಶಪ್ಪ ಹಾಗೂ ಹನಗವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷೆ ಶಶಿಕಲಾ ಲೋಹಿತ್, ಸಂಘದ ನಿರ್ದೇಶಕರು, ಮಾಜಿ ನಿರ್ದೇಶಕರು, ಸದಸ್ಯರು, ಸಂಘದ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರು ಇದ್ದರು.

Leave a Reply

Your email address will not be published. Required fields are marked *