ಸಾಸ್ವೆಹಳ್ಳಿ: ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿ ಗ್ರಾಮದಲ್ಲಿ ಶನಿವಾರ 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ (ಸಿಡಿಒ) ನವೀನ್ ಕುಮಾರ್ ಭಾಗವಹಿಸಿ ಸಹಕಾರ ತತ್ವಗಳು ಹಾಗೂ ಸಂಘಗಳ ಮಹತ್ವದ ಕುರಿತು ಮಾತನಾಡಿದರು. ಗ್ರಾಮೀಣ ಭಾಗದ ರೈತರು ಹಾಗೂ ಸಾರ್ವಜನಿಕರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ಸಂಘಗಳ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೀರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಬಿ. ವಿಶ್ವನಾಥ್, ಉಪಾಧ್ಯಕ್ಷ ಕೇಶವಮೂರ್ತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ, ಸಿಬ್ಬಂದಿ ಮಂಜುನಾಥ್ ಸೇರಿದಂತೆ ಸಂಘದ ನಿರ್ದೇಶಕರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

