Author: Aravind S

ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಹೊನ್ನಾಳಿ:ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ಬೆಳಗ್ಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ದಾವಣಗೆರೆ, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ ಮತ್ತಿತರ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ, ರಥೋತ್ಸವದಲ್ಲಿ ಹರಕೆ, ಕಾಣಿಕೆ ಸಲ್ಲಿಸಿ ಕೃತಾರ್ಥರಾದರು. ಎಲ್ಲಾ…

ಚಿಕ್ಕ ಸಂಸಾರ ದೇಶಕ್ಕೆ ಹಿತಕರ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವ, ರಥೋತ್ಸವದ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಬೆಳೆಯುತ್ತಿರುವ ಜನಸಂಖ್ಯೆ ನಮ್ಮ ದೇಶದ ಎಲ್ಲಾ ಅಭಿವೃದ್ಧಿಯನ್ನು ನುಂಗಿ ಹಾಕುತ್ತಿದೆ. ಆದ್ದರಿಂದ, ನಾವೆಲ್ಲರೂ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಬೇಕಿದೆ. ಹಾಗಾಗಿ,…

ಇಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭ ಡಿಸೆಂಬರ್ 10 ರಂದು ಬೆಳಿಗ್ಗೆ 10.30ಕ್ಕೆ ಬಿ.ಐ.ಇ.ಟಿ ಕಾಲೇಜ್ ಮುಂಭಾಗದಲ್ಲಿರುವ ಯುರೋ ಶಾಲೆಯಲ್ಲಿ ಆಯೋಜಿಸಲಾಗಿದೆ. ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

ಸುಸ್ಥಿರ ಅಭಿವೃದ್ಧಿ ಗುರಿಗಳ ತರಬೇತಿ ಕಾರ್ಯಾಗಾರ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಆಕ್ಷನ್ ಇನ್ಷಿಯೇಟಿವ್ ಫಾರ್ ಡೆವಲಪ್‍ಮೆಂಟ್ ಸಹಯೋಗದಲ್ಲಿ ಸುಸ್ಥಿರ ಅಭಿವೃದ್ದಿ ಗುರಿಗಳ ತರಬೇತಿ ಕಾರ್ಯಾಗಾರ ಡಿಸೆಂಬರ್ 09 ರಂದು ಬೆಳಿಗ್ಗೆ 11 ಗಂಟೆಗೆ ಎಸ್.ಪಿ ಆಪೀಸ್ ಮುಂಭಾದಲ್ಲಿರುವ ಅಡೋರಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಹಿರಿಯ ನ್ಯಾಯಾವಾದಿಗಳಾದ ಎಲ್.ಹೆಚ್…

ಸಾಸ್ವೆಹಳ್ಳಿ: ರೈತರ ಆದಾಯ ದ್ವಿಗುಣಗೊಳಿಸಲು ರೈತರೊಂದಿಗೆ ಸಂವಾದ ಕಾರ್ಯಕ್ರಮ

ಹುಣಸಘಟ್ಟ: ರೈತ ಈಗ ಆರ್ಥಿಕವಾಗಿ ಸದೃಢನಾಗುತ್ತಿದ್ದಾನೆ ಎನ್ನುವುದು ಒಂದು ಕಡೆ ಖುಷಿಯನ್ನು ತಂದುಕೊಟ್ಟರೆ, ಇನ್ನೊಂದು ಕಡೆ ಅಡಿಕೆ ಬೆಳೆ ಪ್ರತಿ ವರ್ಷ ಸಾವಿರಾರು ಎಕ್ಕರೆ ಫಲವತ್ತಾದ ಭತ್ತದ ಬೆಳೆಯುವ ಭೂಮಿ ಅಡಿಕೆ ಬೆಳೆಯಾಗಿ ಪರಿವರ್ತನೆಯಾಗುತ್ತಿದ್ದು ಮುಂದೊಂದು ದಿನ ಎಲ್ಲಿ ಆಹಾರದ ಕೊರತೆ…

ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಬೆನಕನಹಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಸೇಬು ಹಣ್ಣಿನ ಹಾರ ಹಾಕಿ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ

ಹೊನ್ನಾಳಿ:ಮಾಜಿ ಶಾಸಕ, ಹಿರಿಯ ರಾಜಕಾರಣಿ ಡಿ.ಜಿ. ಶಾಂತನಗೌಡ ಅವರು ಗುರುವಾರ ತಮ್ಮ 74ನೇ ಹುಟ್ಟು ಹಬ್ಬವನ್ನು ಕುಟುಂಬ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಆಚರಿಸಿಕೊಂಡರು.ತಮ್ಮ ಹುಟ್ಟುಹಬ್ದದ ದಿನವಾದ ಗುರುವಾರ ತಮ್ಮ ಹುಟ್ಟೂರಾದ ತಾಲೂಕಿನ ಬೆನಕನಹಳ್ಳಿ ಗ್ರಾಮಕ್ಕೆ ಕುಟುಂಬದೊಂದಿಗೆ ತೆರಳಿ…

ಫಲವನಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಮಾತಿಂಗಮ್ಮ ದೇವಿಯ ದೇವಸ್ಥಾನ ಉದ್ಘಾಟಿಸಿ, ದೇವಿಯ ದರ್ಶನ ಪಡೆದ ಎಂಪಿ ರೇಣುಕಾಚಾರ್ಯ.

ನ್ಯಾಮತಿ: ಫಲವನಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಮಾತೆಂಗ್ಯಮ್ಮ ದೇವಿಯ ನೂತನ ದೇವಸ್ಥಾನದ ಲೋಕಾರ್ಪಣೆ ಹಾಗೂ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಹಾಗೂ ಕುಂಭಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ನೂತನ ದೇವಸ್ಥಾನದ ಉದ್ಘಾಟನೆಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ನೆರವೇರಿಸಿದರು.…

ಹೊನ್ನಾಳಿ ತಾಲೂಕಿನ ಕೂಲಂಬಿಯ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಿರ್ಮಾಣಗೊಂಡಿರುವ ಕೈಲಾಸ ಸಭಾ ಮಂಟಪದಲ್ಲಿ ಆಸೀನವಾಗಿರುವ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ.

ಹೊನ್ನಾಳಿ:ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವ, ರಥೋತ್ಸವ, ಸಾಮೂಹಿಕ ವಿವಾಹ ಮತ್ತು ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಡಿ.8 ಮತ್ತು 9ರಂದು ನಡೆಯಲಿವೆ.8ರ ಗುರುವಾರ ಬೆಳಿಗ್ಗೆ 6ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಉರುಳು ಸೇವೆ, ಜವುಳ ಕಾರ್ಯಕ್ರಮ ನಡೆಯಲಿದೆ.…

ದಡಾರ ಹಾಗೂ ರುಬೆಲ್ಲಾ ಲಸಿಕೆ ಹೆಚ್ಚಿಸಲು ಸೂಚನೆ -ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಾವಣಗೆರೆ, ಡಿ.07 : ಜಿಲ್ಲೆಯಲ್ಲಿ ದಡಾರ ಹಾಗೂ ರುಬೆಲ್ಲಾ ಲಸಿಕೆಗಳನ್ನು ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧುವಾರ ಏರ್ಪಡಿಸಲಾಗಿದ್ದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ದಡಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ,…

ಸಾಸ್ವೆಹಳ್ಳಿ : ಶಾಲಾ ಅಕ್ಷರ ದಾಸೋಹ ಸಿಬ್ಬಂದಿಗಳಿಗೆ ಅಡುಗೆ ತಯಾರಿಕಾ ಸ್ಪರ್ಧೆ

ಹುಣಸಘಟ್ಟ: ಇದುವರೆಗೂ ಶಾಲೆಗಳಲ್ಲಿ ಮಕ್ಕಳಿಗೆ ಪ್ರತಿಭಾ ಕಾರಂಜಿ, ಕ್ರೀಡಾ ಚಟುವಟಿಕೆ, ಪಠ್ಯೇತರ ಕಾರ್ಯಕ್ರಮಗಳನ್ನು ಮಕ್ಕಳಿಗೆ ಆಯೋಜಿಸುತ್ತಿದ್ದು, ಸರ್ಕಾರ ಈ ವರ್ಷ ಮೊಟ್ಟಮೊದಲ ಬಾರಿಗೆ ಅಡಿಗೆ ಸಿಬ್ಬಂದಿಯವರಿಗೆ ಅಡಿಗೆ ತಯಾರಿಕಾ ಸ್ಪರ್ಧೆ ಏರ್ಪಡಿಸಿ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು…