ಅಸಂಘಟಿತ ಕಾರ್ಮಿಕ ವಲಯವು ಕೊರೊನಾ ಕಷ್ಟ ಕಾಲದಲ್ಲಿ ಅತ್ಯಂತ ತೊಂದರೆಗೀಡಾಗಿದ್ದು, ಕೇಂದ್ರ ಸರ್ಕಾರವು ಈ ಕೂಡಲೇ ವಿಶೇಷ ಪ್ಯಾಕೇಜನ್ನು ಘೋಷಿಸಬೇಕೆಂದು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷರಾದ ನಂಜಾ ನಾಯ್ಕ ಕಬ್ಬಳ ಇವರು ಆಗ್ರಹಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು ಕೊರೊನ ಎರಡನೇ ಅಲೆಯಲ್ಲಿ ಅಸಂಘಟಿತ ಕಾರ್ಮಿಕರ ವಲಯವು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಇವರ ಸಹಾಯಕ್ಕೆ ರಾಜ್ಯ ಸರ್ಕಾರವಾಗಲಿ ಕೇಂದ್ರ ಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲದೆ ಇರುವುದರಿಂದ ಅನೇಕ ಕುಟುಂಬಗಳು…
