Category: ದಾವಣಗೆರೆ

ಯಶಸ್ವಿನಿ ಯೋಜನೆ ಜಾರಿಗೆ ನೋಂದಣಿ ಪ್ರಕ್ರಿಯೆ ಆರಂಭ

ಸಹಕಾರ ಇಲಾಖೆಯು 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಹೊಸ ಸದಸ್ಯರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನವೆಂಬರ್ 14 ರ ರೊಳಗಾಗಿ ಅರ್ಹರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ  ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ – ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ

ಜಿಲ್ಲಾಡಳಿತದ ವತಿಯಿಂದ ನವೆಂಬರ್ ನ.01 ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಜರುಗಲಿದೆ.ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.ಇದಕ್ಕೂ ಮುನ್ನ ಬೆಳಿಗ್ಗೆ 8.30ಕ್ಕೆ…

ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದ ಕೋಟಿಕಂಠ ಗಾಯನ ಕಾರ್ಯಕ್ರಮವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಮ್ಮೆಲ್ಲರ ಪುಣ್ಯ: ಶಿವಾನಂದ ಕಾಪಶಿ

ಕೋಟಿ ಕಂಠ ಗಾಯನವು ಒಂದು ಅದ್ಭುತವಾದಂತಹ ಕಾರ್ಯಕ್ರಮವಾಗಿದ್ದು, ಈ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಮ್ಮೆಲ್ಲರ ಪುಣ್ಯ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.ಅರವತ್ತೇಳನೇ ಕರ್ನಾಟಕ…

ಮಾಧ್ಯಮ ಕ್ಷೇತ್ರದಲ್ಲಿ ಅಪ್ರೆಂಟಿಸ್ ತರಬೇತಿ: ಪರಿಶಿಷ್ಟ ಜಾತಿ ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅರ್ಜಿ ಕರೆ.

ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.10 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು…

ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವ
ಚೆನ್ನಮ್ಮನವರ ದೇಶಪೇಮ ಎಲ್ಲರಿಗೂ ಅನುಕರಣೀಯವಾಗಿದ್ದು: ಶಿವಾನಂದ್ ಕಾಪಾಶಿ

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚೆನ್ನಮ್ಮನವರ ಬದುಕು, ಹೋರಾಟ ಅನನ್ಯ. ಅವರ ದೇಶಪ್ರೇಮ ಎಲ್ಲರಿಗೂ ಅನುಕರಣೀಯವಾಗಿದ್ದು, ಎಂದು ಜಿಲ್ಲಾಧಿಕಾರಿ ಶಿವಾನಂದ್ ಕಾಪಶಿ ಹೇಳಿದರು ಭಾನುವಾರ ನಗರದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ…

ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಸಂವಿಧಾನದ

ಸಂವಿಧಾನದ ಮೌಲ್ಯಗಳನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿದಾವಣಗೆರೆ ಅ.21ದೇಶದ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ಹೋರಾಡಿ ಹುತಾತ್ಮರಾದ ಪೆÇಲೀಸರ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯವಾದದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಹೇಳಿದರು.ಶುಕ್ರವಾರ ಜಿಲ್ಲಾ ಪೆÇಲೀಸ್ ಇಲಾಖೆ…

ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕರೆ

ದೀಪಾವಳಿ ಬೆಳಕಿನ ಹಬ್ಬ, ಎಲ್ಲರೂ ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಹಬ್ಬವಾಗಿರುವುದರಿಂದ ಪಟಾಕಿಗಳನ್ನು ಬಳಸುವಾಗ ಎಚ್ಚರವಹಿಸಬೇಕು. ಸ್ವಲ್ಪ ಮೈಮರೆತಲ್ಲಿ ಜೀವನದ ಬೆಳಕನ್ನೇ ಕಸಿದುಕೊಳ್ಳಬಹುದು. ಹಬ್ಬವನ್ನು ಜಾಗರೂಕತೆ ಹಾಗೂ ಸುರಕ್ಷತೆಯಿಂದ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ ಮಾಡಿದೆ.ಅಪಾರ್ಟ್ ಮೆಂಟ್,…

ರಾಜ್ಯ ಮಹಿಳಾ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ

ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ನಡೆಯುವ 19 ವರ್ಷದೊಳಗಿನ ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿಗಳಿಗೆ ರಾಜ್ಯ ಮಹಿಳಾ ವಾಲಿಬಾಲ್ ತಂಡದ ಆಯ್ಕೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಶಾಖೆಯಾದ ಕ್ರೀಡಾ ಕಲ್ಯಾಣದ ಮೂಲಕ ಅ.27 ರಂದು ಬೆಳಿಗ್ಗೆ 9…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅ.27 ಮತ್ತು 28 ರಂದು ಕುರಿ ಮತ್ತು ಮೆಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.…

ಅ.23 ರಂದು 7ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಶ್ವಿನಿ, ತಪೋವನ ಮತ್ತು ಸುಶ್ರುತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಗಳು, ಜಿಲ್ಲಾ ಯೋಗ ಒಕ್ಕೂಟ, ಆಯುರ್ವೇದ ಔಷಧಿ ಪ್ರತಿನಿಧಿಗಳು, ವಿತರಕರು ಮತ್ತು ಮಾರಾಟಗಾರರು ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 23 ರಂದು…